
ಆಟವಾಡುವಾಗ ಜೋಕಾಲಿಗೆ ಸಿಲುಕಿ ಬಾಲಕಿ ಸಾವನ್ನಪ್ಪಿದ ಘಟನೆ ಮಾಗಡಿ ಪಟ್ಟಣದಲ್ಲಿ ನಡೆದಿದೆ. 9 ವರ್ಷದ ಚಂದನಾ ಮೃತಪಟ್ಟ ಬಾಲಕಿ ಎಂದು ಹೇಳಲಾಗಿದೆ.
ಸುರೇಶ್ ಮತ್ತು ಮಂಜುಳಾ ದಂಪತಿಯ ಪುತ್ರಿಯಾಗಿರುವ ಚಂದನಾ ಜೋಕಾಲಿ ಆಡುವ ವೇಳೆ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಅಗಲಕೋಟೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಮಾಗಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.