ಚಿಕ್ಕಮಗಳೂರು: ಕೆಫೆ ಕಾಫಿ ಡೇ ಮುಖ್ಯಸ್ಥ ಸಿದ್ಧಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಸಿದ್ಧಾರ್ಥ್ ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಚೆಕ್ ಬೌನ್ಸ್ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಸಿದ್ಧಾರ್ಥ್ ಹೆಗ್ಡೆ ಅವರ ಎಬಿಸಿ ಸಂಸ್ಥೆ ವಿರುದ್ಧ ಕಾಫಿ ಬೆಳೆಗಾರರು ಕೋರ್ಟ್ ಮೆಟ್ಟಿಲೇರಿದ್ದರು. ಸಿದ್ಧಾರ್ಥ್ ಪತ್ನಿ ಮಾಳವಿಕಾ ಸೇರಿದಂತೆ 8 ಜನರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಕೋರ್ಟ್ ಗೆ ಹಾಜರಾಗಿ ವಿಚಾರಣೆ ಎದುರಿಸದ ಹಿನ್ನೆಲೆಯಲ್ಲಿ ಮಾಳವಿಕಾ ಸೇರಿದಂತೆ ಐವರ ವಿರುದ್ಧ ಬಂಧನ ವಾರಂಟ್ ಜಾರಿಯಾಗಿತ್ತು.
ಇದೀಗ ಮಾಳವಿಕಾ ಕೋರ್ಟ್ ಗೆ ಹಾಜರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಜೆಎಂಎಫ್ ಸಿ ಕೋರ್ಟ್ ಮಾಳವಿಕಾ ಸೇರಿದಂತೆ ಐದು ಜನರಿಗೆ ಜಾಮೀನು ಮಂಜೂರು ಮಾಡಿದೆ.