ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಪರಿಚಿತರು ಕರೆಮಾಡಿ ಜೀವ ಬೆದರಿಕೆ ಹಾಕಿದ್ದಾರೆ.
ಈ ಸಂಬಂಧ ಪ್ರಿಯಾಂಕ್ ಖರ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.
ಭಾನುವಾರ ಮಧ್ಯರಾತ್ರಿ 1.30 ರ ಸುಮಾರಿಗೆ ಕರೆ ಮಾಡಿದ ವ್ಯಕ್ತಿ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತನಾಡಿದ್ದು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ರಾಜ್ಯಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುವ ವಿಷಯವನ್ನು ಪ್ರಸ್ತಾಪಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರು ನೀಡಲಾಗಿದೆ.