alex Certify ಕಾರ್ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಹತ್ಯೆ

ಮಂಡ್ಯ: ರಂಗನತಿಟ್ಟು ಕ್ರಾಸ್ ಸಮೀಪ ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಕೊಲೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ಘಟನೆ ನಡೆದಿದೆ.

ರೌಡಿಶೀಟರ್ ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಕಾರ್ ಅಡ್ಡಗಟ್ಟಿದ ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.

ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಮುಂದಿನಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...