alex Certify ಮಂಗಳೂರಲ್ಲಿ ಫೈರಿಂಗ್: ಜನನಿಬಿಡ ಸ್ಥಳದಲ್ಲೇ ಯುವಕರಿಂದ ಗುಂಡಿನ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರಲ್ಲಿ ಫೈರಿಂಗ್: ಜನನಿಬಿಡ ಸ್ಥಳದಲ್ಲೇ ಯುವಕರಿಂದ ಗುಂಡಿನ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಳ್ನೀರ್ ಸಮೀಪದ ಹೋಟೆಲ್ ಬಳಿ ಫೈರಿಂಗ್ ಮಾಡಲಾಗಿದೆ.

ಹೋಟೆಲ್ ನಲ್ಲಿ ಸಮೋಸ ಖರೀದಿಗೆ ಬಂದಿದ್ದ ಅಪರಿಚಿತರು ಗಲಾಟೆ ನಡೆಸಿದ್ದಾರೆ. ಹೋಟೆಲ್ ಸಿಬ್ಬಂದಿಯೊಂದಿಗೆ ಅಪರಿಚಿತರು ಮಾತಿನ ಚಕಮಕಿ ನಡೆಸಿದ್ದು ಇಬ್ಬರು ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಗಾಜು ಪೀಠೋಪಕರಣ ಧ್ವಂಸ ಮಾಡಲಾಗಿದೆ.

ಕಿಡಿಗೇಡಿಗಳನ್ನು ಹಿಡಿಯಲು ಹೋಟೆಲ್ ಸಿಬ್ಬಂದಿ ಹಿಡಿಯುವ ಪ್ರಯತ್ನ ನಡೆಸಿದ್ದು ಎರಡು ಸುತ್ತು ಗುಂಡು ಹಾರಿಸಿ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗುಂಡೇಟು ತಗುಲಿ ಹೋಟೆಲ್ ನ ಒಬ್ಬ ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಾರಿಯಾಗುತ್ತಿದ್ದ ನಾಲ್ವರ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ಆಟೋರಿಕ್ಷಾದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರಿನ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...