alex Certify ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪೊಲೀಸ್ ವಿರುದ್ಧ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪೊಲೀಸ್ ವಿರುದ್ಧ ದೂರು

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ.

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿಯಾಗಿರುವ ಪೊಲೀಸ್ ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ. ಜೂನ್ 12 ರಂದು ಮಂಗಳೂರಿನ ವಸತಿಗೃಹಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ಜೊತೆಗೆ ಸೇರಿ ಬೆಂಗಳೂರಿನ ಮತ್ತೊಬ್ಬ ವ್ಯಕ್ತಿ ಬೆದರಿಕೆ ಹಾಕಿದ್ದು ಈ ಬಗ್ಗೆ ಕ್ರಮ ಕೈಗೊಂಡು ನ್ಯಾಯ ದೊರಕಿಸಿಕೊಡುವಂತೆ ಇವತ್ತು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...