alex Certify ಬಯಲಾಯ್ತು ಪ್ರೀತಿಸಿ ಮದುವೆಯಾಗುವುದಾಗಿ ದೈಹಿಕ ಸಂಪರ್ಕ ಬೆಳೆಸಿದವನ ಅಸಲಿಯತ್ತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಯಲಾಯ್ತು ಪ್ರೀತಿಸಿ ಮದುವೆಯಾಗುವುದಾಗಿ ದೈಹಿಕ ಸಂಪರ್ಕ ಬೆಳೆಸಿದವನ ಅಸಲಿಯತ್ತು

ಬೆಂಗಳೂರು: ಪ್ರೀತಿಸುವುದಾಗಿ ನಂಬಿಸಿ ಯುವತಿಯನ್ನು ದೈಹಿಕವಾಗಿ ಬಳಸಿಕೊಂಡ ವ್ಯಕ್ತಿಯೊಬ್ಬ ವಂಚಿಸಿದ ಘಟನೆ ನಡೆದಿದೆ.

ಮದುವೆಯಾಗುವುದಾಗಿ ನಂಬಿಸಿ ಯುವತಿಯಿಂದ 8.48 ಲಕ್ಷ ರೂಪಾಯಿ ಪಡೆದು ವಂಚಿಸಲಾಗಿದ್ದು, ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಚರಕನಹಳ್ಳಿ ಆಂಜಿನಪ್ಪ ಲೇಔಟ್ ನಿವಾಸಿಯಾಗಿರುವ 27 ವರ್ಷದ ಯುವತಿ ವಿಜ್ಞಾನ ನಗರ ನಿವಾಸಿ ಶಾಮ್ ಶ್ರೀನಿವಾಸ್ ಎಂಬುವನ ವಿರುದ್ಧ ಅತ್ಯಾಚಾರ ಮತ್ತು ವಂಚನೆಯ ದೂರು ದಾಖಲಿಸಿದ್ದಾರೆ.

ಯುವತಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಾಮ್ ಪರಿಚಯಿಸಿಕೊಂಡಿದ್ದು, ನಂತರದಲ್ಲಿ ಇಬ್ಬರ ನಡುವೆ ಪ್ರೀತಿ ಬೆಳೆದಿದೆ. ಮದುವೆಯಾಗುವುದಾಗಿ ನಂಬಿಸಿದ್ದ ಶಾಮ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಬಳಿಕ ಯುವತಿಯಿಂದ ಹಂತ ಹಂತವಾಗಿ 8.48 ಲಕ್ಷ ರೂಪಾಯಿ ಪಡೆದುಕೊಂಡು ವಂಚಿಸಿದ್ದಾನೆ. ಆತನಿಗೆ ಮದುವೆಯಾಗಿರುವ ವಿಷಯ ಗೊತ್ತಾಗಿ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...