ಬೆಂಗಳೂರು: ಯಾವುದೇ ಕಾರಣಕ್ಕೂ ಲಾಕ್ಡೌನ್ ವಿಸ್ತರಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವರು ಸ್ಪಷ್ಟಪಡಿಸಿದ್ದರೂ, ತಜ್ಞರು ಇನ್ನೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡಬೇಕೆಂದು ಹೇಳಿದ್ದಾರೆನ್ನಲಾಗಿದೆ.
ರಾಜ್ಯದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದೆ. ಲಾಕ್ಡೌನ್ ಜಾರಿಯಾದ ನಂತರ ಚಿಕಿತ್ಸೆಗೆ ಕೈಗೊಂಡ ಕ್ರಮಗಳು, ಸಿದ್ಧತೆ, ಲಾಕ್ಡೌನ್ ವಿಸ್ತರಣೆ, ಆಯುರ್ವೇದ ಚಿಕಿತ್ಸೆ ಬಳಕೆ ಮೊದಲಾದ ವಿಷಯಗಳ ಕುರಿತು ಚರ್ಚೆ ನಡೆಸುವ ಸಲುವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ.
ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ರಾಜ್ಯದ ಕೊರೊನಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆಸಿ ಆಯುರ್ವೇದ ಚಿಕಿತ್ಸೆ ಬಳಕೆ ಮತ್ತು ಲಾಕ್ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.