alex Certify ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸೆಪ್ಟಂಬರ್ 11 ರ ಶುಕ್ರವಾರದಿಂದ ಮೆಟ್ರೋ ರೈಲು ಸಂಚಾರ ಪೂರ್ಣಾವಧಿ ಇರಲಿದೆ. ಕೊರೊನಾ ಲಾಕ್ ಡೌನ್ ಕಾರಣದಿಂದ 5 ತಿಂಗಳಿಂದ ಸ್ಥಗಿತಗೊಂಡಿದ್ದರಿಂದ ಮೆಟ್ರೋ ಸಂಚಾರ ಕಳೆದ ಸೋಮವಾರದಿಂದ ಆರಂಭವಾಗಿದೆ.

ಬೆಳಿಗ್ಗೆ 8 ರಿಂದ 11 ಮತ್ತು ಸಂಜೆ 4.30 ರಿಂದ 7.30 ರವರೆಗೆ ಸಂಚರಿಸುತ್ತಿದ್ದ ಮೆಟ್ರೋ ರೈಲುಗಳು ಇಂದಿನಿಂದ ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಸಂಚರಿಸಲಿವೆ. ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ.

ಪೂರ್ಣಪ್ರಮಾಣದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿರುವ ಹಿನ್ನಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ ಎನ್ನುವ ವಿಶ್ವಾಸ ಬಿಎಂಆರ್ಸಿಎಲ್ ಅಧಿಕಾರಿಗಳಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...