ಬೆಂಗಳೂರು: ಕೊರೊನಾ ಕಾರಣದಿಂದ ಬರೋಬ್ಬರಿ 5 ತಿಂಗಳ ನಂತರ ಮೆಟ್ರೋ ಸಂಚಾರ ಇಂದಿನಿಂದ ಪುನಾರಂಭವಾಗಿದೆ.
ಆರೋಗ್ಯ ಸಚಿವ ಬಿ. ಶ್ರೀರಾಮುಲು ಮೆಟ್ರೋದಲ್ಲಿ ಸಂಚರಿಸಿ ಸುರಕ್ಷಿತ ಪ್ರಯಾಣಕ್ಕೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ್ದಾರೆ. ವಿಧಾನಸೌಧ ನಿಲ್ದಾಣದಿಂದ ಮೆಜೆಸ್ಟಿಕ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಶ್ರೀರಾಮುಲು ಮೆಟ್ರೋದಲ್ಲಿ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಭಯಬೇಡ. ಆದರೆ ಎಚ್ಚರಿಕೆ ಅಗತ್ಯ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ, ಈ ನಿಟ್ಟಿನಲ್ಲಿ ಎಲ್ಲಾ ಪ್ರಯಾಣಿಕರು ಸರ್ಕಾರದ ನಿಯಮಗಳನ್ನು ಪಾಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.