ರಾಮನಗರ: ವಿದ್ಯಾಗಮ ಯೋಜನೆಯಡಿ ಮನೆ ಪಾಠ ಕಲಿಯುತ್ತಿರುವ ಮಕ್ಕಳಿಗೆ ಹಾಲಿನ ಪುಡಿ ವಿತರಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಸೋಮಶೇಖರ್ ಹೇಳಿದ್ದಾರೆ.
ರಾಜ್ಯದಲ್ಲಿ ಲಾಕ್ಡೌನ್ ನಿಂದಾಗಿ 126 ಸಾವಿರ ಟನ್ ಹಾಲಿನ ಪುಡಿ ಮಾರಾಟವಾಗದೆ ಉಳಿದಿದ್ದು ವಿದ್ಯಾಗಮ ಯೋಜನೆಯಡಿ ಮನೆ ಪಾಠ ಕಲಿಯುತ್ತಿರುವ ಮಕ್ಕಳಿಗೆ ವಿತರಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಚನ್ನಪಟ್ಟಣದ ಕೆಎಂಎಫ್ ಹಾಲಿನ ಪುಡಿ ತಯಾರಿಕಾ ಘಟಕಕ್ಕೆ ಭೇಟಿ ನೀಡಿದ ಅವರು ಮಾತನಾಡಿ, ಕೊರೋನಾ ಕಾರಣದಿಂದ ರಫ್ತು ಬಂದ್ ಆಗಿತ್ತು. ಹೀಗಾಗಿ ಹೆಚ್ಚುವರಿಯಾಗಿ ಉಳಿದ ಹಾಲನ್ನು ಹಾಲಿನ ಪುಡಿಯಾಗಿ ಪರಿವರ್ತಿಸಿ ದಾಸ್ತಾನು ಮಾಡಲಾಗಿದೆ. ಮಾರಾಟವಾಗದೇ ಉಳಿದ ಹಾಲಿನ ಪುಡಿಯನ್ನು ಶಾಲಾ ಮಕ್ಕಳಿಗೆ ವಿತರಿಸಲಿದ್ದು, ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಿ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.