ಬೆಂಗಳೂರು: ಕೊರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ವೈದ್ಯಕೀಯ ಶಿಕ್ಷಣ ಇಲಾಖೆಯ ವೈದ್ಯರಿಗೆ ಸಿಹಿ ಸುದ್ದಿ ಸಿಕ್ಕಿದೆ.
7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಿಸ್ತರಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದು, ಇದರಿಂದ ರಾಜ್ಯದ ಬೊಕ್ಕಸಕ್ಕೆ 137 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಹೇಳಿದ್ದಾರೆ.