alex Certify ರಾಜ್ಯದಲ್ಲಿ ಲಾಕ್​ಡೌನ್​ ಮುಂದುವರಿಕೆ ಸುಳಿವು ನೀಡಿದ ಸಚಿವ ಆರ್​. ಅಶೋಕ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಲಾಕ್​ಡೌನ್​ ಮುಂದುವರಿಕೆ ಸುಳಿವು ನೀಡಿದ ಸಚಿವ ಆರ್​. ಅಶೋಕ್​

ರಾಜ್ಯದಲ್ಲಿ ಕೊರೊನಾ ಲಾಕ್​ಡೌನ್​ ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಮೇ 24ರವರೆಗೆ ಲಾಕ್​ಡೌನ್​ ಆದೇಶವನ್ನ ಜಾರಿಗೆ ತಂದಿದೆ. ಲಾಕ್​ಡೌನ್​ ಬಳಿಕ ರಾಜ್ಯದಲ್ಲಿ ಸೋಂಕಿನ ಸಂಖ್ಯೆ ಇಳಿಮುಖವಾಗಿದ್ದು ರಾಜ್ಯದಲ್ಲಿ ಲಾಕ್​ಡೌನ್​ ಮತ್ತೆ ಮುಂದುವರಿಯುತ್ತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

ಈ ಮಾತಿಗೆ ಪುಷ್ಠಿ ನೀಡುವಂತೆ ಕಂದಾಯ ಸಚಿವ ಆರ್​. ಅಶೋಕ್​ ಮಹತ್ವದ ಹೇಳಿಕೆಯೊಂದನ್ನ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಆರ್​. ಅಶೋಕ್​ ನಾನು ಕೂಡ ಒಬ್ಬ ಬೆಂಗಳೂರಿನ ನಾಗರಿಕನಾಗಿ ಲಾಕ್​ಡೌನ್​ ಮುಂದುವರಿಯಲಿ ಎಂದೇ ಬಯಸುತ್ತೇನೆ. ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯದಲ್ಲಿ ಲಾಕ್​ಡೌನ್ ಮುಂದುವರಿಯುವ ಅವಶ್ಯಕತೆ ಇದೆ.

ಕೊರೊನಾದ ಎರಡು ಬೇರೆ ಬೇರೆ ಲಸಿಕೆ ಹಾಕಿಸಿಕೊಂಡ್ರೆ ಏನಾಗುತ್ತೆ…? ಇಲ್ಲಿದೆ ಮಾಹಿತಿ

ಹೀಗಾಗಿ ನಾನು ಸಿಎಂಗೆ ಲಾಕ್​​ಡೌನ್ ಮುಂದುವರಿಸುವ ಬಗ್ಗೆಯೇ ಸಲಹೆಯನ್ನ ನೀಡುವೆ. ಮಹಾರಾಷ್ಟ್ರದಲ್ಲಿ 47 ದಿನಗಳ ಕಾಲ ಲಾಕ್​ಡೌನ್​ ಮಾಡಲಾಗಿತ್ತು. ದೆಹಲಿಯಲ್ಲಿ ಈಗಲೂ ಸಹ ಲಾಕ್​ಡೌನ್​ ಆದೇಶ ಜಾರಿಯಲ್ಲಿದೆ. ರಾಜ್ಯದಲ್ಲೂ ಸೆಮಿ ಲಾಕ್​ಡೌನ್​ ಹಾಗೂ ಲಾಕ್​ಡೌನ್​ ಆದೇಶದ ಬಳಿಕ ಸೋಂಕಿನ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ಲಾಕ್​ಡೌನ್​ ಆದೇಶವನ್ನ ಮೊದಲು ವಿಪಕ್ಷಗಳು ಗೇಲಿ ಮಾಡಿದ್ದವು. ಆದರೆ ರಾಜ್ಯದಲ್ಲಿ ಸೋಂಕಿನ ಸಂಖ್ಯೆ ಇಳಿಮುಖವಾಗುವಲ್ಲಿ ಲಾಕ್​ಡೌನ್​ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದ್ರು.

ಇನ್ನು ಇದೇ ವೇಳೆ ಕೊರೊನಾ ಮೂರನೇ ಅಲೆಯ ವಿಚಾರವಾಗಿಯೂ ಮಾತನಾಡಿದ ಅವ್ರು, ಕೊರೊನಾ 3ನೇ ಅಲೆಯಲ್ಲಿ ಮಕ್ಕಳಿಗೆ ಅಪಾಯವಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಮಕ್ಕಳಿಗೆಂದೇ 50 ಬೆಡ್​ಗಳ ವಿಶೇಷ ಕೇಂದ್ರವನ್ನ ತೆರೆಯಲಾಗಿದೆ. ಇಲ್ಲಿ ಮಕ್ಕಳ ಜೊತೆಯಲ್ಲಿ ಪೋಷಕರಿಗೆ ಇರಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...