alex Certify ಮೈಸೂರು ಮೃಗಾಲಯಕ್ಕೆ 2.2 ಲಕ್ಷ ರೂ. ದೇಣಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು ಮೃಗಾಲಯಕ್ಕೆ 2.2 ಲಕ್ಷ ರೂ. ದೇಣಿಗೆ

ಮೈಸೂರು: ಮೈಸೂರು ಜಯಚಾಮರಾಜೇಂದ್ರ ಮೃಗಾಲಯಕ್ಕೆ ಯಶವಂತಪುರ ಕ್ಷೇತ್ರದ ಶಾರದಾ ಜ್ಞಾನಾಕ್ಷಿ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡಿದ 2 ಲಕ್ಷದ 2 ಸಾವಿರ ರೂಪಾಯಿ ದೇಣಿಗೆ ನೀಡಲಾಗಿದೆ.

ಚೆಕ್ ಅನ್ನು ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಂಘದ ಅಧ್ಯಕ್ಷ ದೊಡ್ಡ ಅರಸಿನಕೆರೆ ಪ್ರೊ. ಮಾಯಪ್ಪ ಅವರ ಮುಖಾಂತರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಅವರಿಗೆ ಹಸ್ತಾಂತರಿಸಿದರು.

ಈ ಮೂಲಕ ಮೃಗಾಲಯಕ್ಕೆ ಒಟ್ಟು 3 ಕೋಟಿ 50 ಲಕ್ಷದ 2 ಸಾವಿರ ರೂಪಾಯಿ ದೇಣಿಗೆಯನ್ನು ಹಸ್ತಾಂತರಿಸಿದಂತಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಬಿಜೆಪಿ ನಗರಾಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಇತರರು ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...