
ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್ ಮತ್ತು ಹೆಚ್. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಚನೆಯ ಸಂದರ್ಭದಲ್ಲಿ ಪಕ್ಷದ ನಾಯಕರು ನೀಡಿದ ಭರವಸೆಯನ್ನು ಈಡೇರಿಸುವ ವಿಶ್ವಾಸವಿದೆ. ವಿಧಾನ ಪರಿಷತ್ ಸದಸ್ಯರಾಗಿರುವ ಎಂಟಿಬಿ ನಾಗರಾಜ್, ಹೆಚ್. ವಿಶ್ವನಾಥ್ ಮತ್ತು ಆರ್. ಶಂಕರ್ ಅವರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದವರಿಗೆ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಲಾಗಿದ್ದು, ಈ ಮೂವರಿಗೆ ಕೂಡ ಶೀಘ್ರವೇಶ ಸಚಿವ ಸ್ಥಾನ ನೀಡಲಾಗುವುದು ಎಂದು ಹೇಳಲಾಗಿದೆ.