ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವ ಧಾವಂತವಿಲ್ಲ. ನಮ್ಮ ಸರ್ಕಾರಕ್ಕೆ ಅಥವಾ ಶಿಕ್ಷಣ ಇಲಾಖೆಗೆ ಯಾವುದೇ ಧಾವಂತವಿಲ್ಲ. ನಮಗೆ ಮಕ್ಕಳ ಆರೋಗ್ಯ, ಸುರಕ್ಷತೆ ಅತ್ಯಂತ ಮುಖ್ಯವಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ನಾನು ಬಾರಿ ಬಾರಿ ಈ ಕುರಿತಂತೆ ಸ್ಪಷ್ಟೀಕರಣ ಕೊಡುತ್ತಲೇ ಬಂದಿದ್ದೇನೆ. ಶಿಕ್ಷಣ ಇಲಾಖೆಯ ಮುಂದಿನ ತೀರ್ಮಾನವನ್ನು ಮಕ್ಕಳ ಆರೋಗ್ಯ, ಸುರಕ್ಷತೆ ಆದ್ಯತೆಯಲ್ಲಿ ಇಟ್ಟುಕೊಂಡು ಎಲ್ಲರೊಡನೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಯಾವುದನ್ನು ಧಿಡೀರ್ ಎಂದು ಘೋಷಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಪೋಷಕರ ಮನಸ್ಸಿನಲ್ಲಿ ಕಿಂಚಿತ್ತು ಕೂಡ ಈಗಾಗಲೇ ಮುಖ್ಯಮಂತ್ರಿಯವರು ಕೂಡ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ನಾನು ಮತ್ತೊಮ್ಮೆ ಮಗದೊಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ ಎಂದು ಸಚಿವರು ಹೇಳಿದ್ದಾರೆ.