ಮೈಸೂರಿನ ಕೋವಿಡ್ ಆಸ್ಪತ್ರೆಯಿಂದ ವೃದ್ಧ ನಾಪತ್ತೆಯಾಗಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಮೈಸೂರಿನ ಕುಂಬಾರಗೇರಿಯ 76 ವರ್ಷದ ವೃದ್ಧನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ನೆನಪಿನ ಶಕ್ತಿ, ಮಾನಸಿಕ ಸಮಸ್ಯೆ ಇರುವ ಅವರು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಹುಡುಕಿಕೊಡುವಂತೆ ಕುಟುಂಬದವರು ಮನವಿ ಮಾಡಿದ್ದಾರೆ. ಸೋಂಕು ತಗುಲಿದ ವೃದ್ಧ ನಾಪತ್ತೆಯಾಗಿರುವುದು ಮೈಸೂರಿನಲ್ಲಿ ಆತಂಕ ಹೆಚ್ಚಿಸಿದೆ.
ಗುರುವಾರ ಮಧ್ಯಾಹ್ನ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿಂದ ನಾಪತ್ತೆಯಾಗಿದ್ದಾರೆ. ಕುಟುಂಬದವರು ವೃದ್ಧನ ಬಗ್ಗೆ ವಿಚಾರಿಸಿದಾಗ ನಾಪತ್ತೆಯಾಗಿರುವ ವಿಷಯ ಗೊತ್ತಾಗಿದೆ ಎನ್ನಲಾಗಿದೆ.