alex Certify BIG NEWS: ಕೋವಿಡ್ ನಿಂದ JDS ನಾಯಕ, ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ನಿಂದ JDS ನಾಯಕ, ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

Appaji Gowda m.j Bhadravathi - YouTubeಶಿವಮೊಗ್ಗ: ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ನಾಯಕ ಎಂ.ಜೆ. ಅಪ್ಪಾಜಿಗೌಡ(67) ಕೊರೋನಾ ಸೋಂಕಿನಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅಪ್ಪಾಜಿಗೌಡ ನಿಧನದ ಸುದ್ದಿ ತಿಳಿಯುತ್ತಲೇ ಮೆಗ್ಗಾನ್ ಆಸ್ಪತ್ರೆ ಎದುರು ಜನಸಾಗರವೇ ನೆರೆದಿತ್ತು. ನಂತರ ಮೃತದೇಹವನ್ನು ಭದ್ರಾವತಿಯ ನಿವಾಸಕ್ಕೆ ತರಲಾಗಿದ್ದು ಅಂತಿಮದರ್ಶನಕ್ಕೆ ಜನಸಾಗರವೇ ಹರಿದುಬಂದಿದೆ.

ಎರಡು ಸಲ ಪಕ್ಷೇತರ ಅಭ್ಯರ್ಥಿಯಾಗಿ ಚುನಾಯಿತರಾಗಿದ್ದ ಅವರು 2013 ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಭಾರೀ ಮತಗಳ ಅಂತರದಿಂದ ಜಯಗಳಿಸಿದ್ದರು. ಇವತ್ತು ಮಧ್ಯಾಹ್ನ ಭದ್ರಾವತಿ ತಾಲ್ಲೂಕಿನ ಗೋಣಿಬೀಡಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...