
ಬೆಂಗಳೂರು: ಶಾಸಕರ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ರಾಜ್ಯ ಬಿಜೆಪಿ ನಿಯೋಗ ಭೇಟಿ ನೀಡಿದೆ.
ಬಿಜೆಪಿ ನಾಯಕರಾದ ಅರವಿಂದ ಲಿಂಬಾವಳಿ, ಚಲವಾದಿ ನಾರಾಯಣಸ್ವಾಮಿ, ಮಾಲೀಕಯ್ಯ ಗುತ್ತೇದಾರ್, ಪಿ.ಸಿ. ಮೋಹನ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಿದ್ದಾರೆ. ಮೊದಲಿಗೆ ಮುನೇಗೌಡ ಅವರ ಮನೆಗೆ ಭೇಟಿ ನೀಡಿದ ನಿಯೋಗ ಬಳಿಕ ಶಾಸಕರ ಮನೆಗೆ ಭೇಟಿ ನೀಡಿದೆ.
ಶಾಸಕರ ಮನೆ ಮೇಲೆ ದಾಳಿ ಮಾಡಿದ್ದ ಗಲಭೆಕೋರರು ಮನೆಗೆ ಬೆಂಕಿ ಹಲವು ವಸ್ತುಗಳನ್ನು ದೋಚಿದ್ದರು. ಸುಮಾರು 3 ಕೋಟಿ ರೂಪಾಯಿಯಷ್ಟು ಹಾನಿಯಾಗಿದೆ ಎನ್ನಲಾಗಿದೆ. ನಿನ್ನೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇವತ್ತು ಬಿಜೆಪಿ ನಿಯೋಗ ಭೇಟಿ ನೀಡಿದೆ. ಗಲಭೆ ವಿಚಾರ ರಾಜಕೀಯ ಆರೋಪ – ಪ್ರತ್ಯಾರೋಪಗಳಿಗೂ ಬಳಕೆಯಾಗಿದೆ.