alex Certify BIG NEWS: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪರಿಷತ್ ಅಭ್ಯರ್ಥಿಗಳ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪರಿಷತ್ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇಂದು ನಡೆಯಲಿದೆ.

ಆರ್. ಶಂಕರ್, ಎಂಟಿಬಿ ನಾಗರಾಜ್, ರೋಷನ್ ಬೇಗ್, ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರೊಂದಿಗೆ ಕೇಂದ್ರದ ವರಿಷ್ಠರ ಮನೋಭಾವನೆಗೆ ತಕ್ಕಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿರುವುದರಿಂದ ಅಳೆದು-ತೂಗಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ.

ಈಗಾಗಲೇ ಜಿಲ್ಲಾ ಸಮಿತಿಗಳಿಂದ ಅಭ್ಯರ್ಥಿಗಳ ಹೆಸರುಗಳನ್ನು ರಾಜ್ಯ ಸಮಿತಿಗೆ ಶಿಫಾರಸು ಮಾಡಲಾಗಿದೆ. ಪಕ್ಷಕ್ಕಾಗಿ ಕಾರ್ಯನಿರ್ವಹಿಸಿದವರು ಮತ್ತು ಸರ್ಕಾರ ರಚನೆಯಲ್ಲಿ ನೆರವಾದವರಿಗೆ ವಿಧಾನಪರಿಷತ್ ಟಿಕೆಟ್ ಸಿಗಲಿದೆ ಎಂದು ಈಗಾಗಲೇ ಮುಖಂಡರು ಸುಳಿವು ನೀಡಿದ್ದಾರೆ. ಕೋರ್ ಕಮಿಟಿ ಸಭೆಯಲ್ಲಿ ಶಿಫಾರಸು ಮಾಡಿದ್ದ ರಾಜ್ಯಸಭೆ ಅಭ್ಯರ್ಥಿಗಳ ಹೆಸರನ್ನು ಕೇಂದ್ರ ಸಮಿತಿ ಬದಲಿಸಿದ್ದು ಈಗ ವಿಧಾನಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಎಚ್ಚರಿಕೆ ಹೆಜ್ಜೆ ಇಡಲಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...