alex Certify ವಿಧಾನಪರಿಷತ್ ಗೆ ಎಂಟಿಬಿ, ಆರ್. ಶಂಕರ್, ಹರಿಪ್ರಸಾದ್, ಪ್ರತಾಪ್ ಸಿಂಹ ಸೇರಿ 7 ಮಂದಿ ಅವಿರೋಧ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಪರಿಷತ್ ಗೆ ಎಂಟಿಬಿ, ಆರ್. ಶಂಕರ್, ಹರಿಪ್ರಸಾದ್, ಪ್ರತಾಪ್ ಸಿಂಹ ಸೇರಿ 7 ಮಂದಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಪರಿಷತ್ ಗೆ 7 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ 7 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

7 ಸ್ಥಾನಗಳಿಗೆ 8 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಾಗಿದ್ದು ಸೂಚಕರು ಇಲ್ಲದೇ ನಾಮಪತ್ರ ಸಲ್ಲಿಸಿದ್ದ ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕಾರವಾದ ಹಿನ್ನೆಲೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ನಾಲ್ವರು, ಕಾಂಗ್ರೆಸ್ ಪಕ್ಷದ ಇಬ್ಬರು ಮತ್ತು ಜೆಡಿಎಸ್ ಪಕ್ಷದ ಓರ್ವ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯಿಂದ ಎಂಟಿಬಿ ನಾಗರಾಜ್, ಆರ್. ಶಂಕರ್, ಸುನಿಲ್ ವಲ್ಯಾಪುರೆ, ಪ್ರತಾಪ್ ಸಿಂಹ ನಾಯಕ್, ಕಾಂಗ್ರೆಸ್ ಪಕ್ಷದ ಬಿ.ಕೆ. ಹರಿಪ್ರಸಾದ್, ನಾಸೀರ್ ಅಹಮ್ಮದ್, ಜೆಡಿಎಸ್ ಪಕ್ಷದ ಇಂಚರ ಗೋವಿಂದರಾಜ್ ಅವಿರೋಧ ಆಯ್ಕೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...