ರಾಜ್ಯಕ್ಕೆ ಪ್ರವೇಶಿಸಿರುವ ಮುಂಗಾರು ಇನ್ನೆರಡು ದಿನದಲ್ಲಿ ಬಿರುಸುಗೊಳ್ಳಲಿದೆ. ನಿಸರ್ಗ ಚಂಡಮಾರುತದ ಕಾರಣದಿಂದ ಆರಂಭದಲ್ಲೇ ಕ್ಷೀಣಿಸಿದ ಮುಂಗಾರುಮಳೆ ಇನ್ನೆರಡು ದಿನದಲ್ಲಿ ಪ್ರಬಲವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 9ರಂದು ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜೂನ್ 11 ರಿಂದ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ. ಈಗಾಗಲೇ ಜಮೀನು ಹಸನು ಮಾಡಿಕೊಂಡ ಅನೇಕ ರೈತರು ಬಿತ್ತನೆ ಆರಂಭಿಸಿದ್ದು, ಮಳೆ ನಿರೀಕ್ಷೆಯಲ್ಲಿದ್ದಾರೆ.