ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈಗಾಗಲೇ ಕೇರಳ ಪ್ರವೇಶಿಸಿದ ಮುಂಗಾರು ಮಾರುತಗಳು ರಾಜ್ಯದ ದಕ್ಷಿಣ ಒಳನಾಡು ಪ್ರವೇಶಿಸಿದ್ದು, ಇನ್ನೆರಡು ದಿನದಲ್ಲಿ ಮುಂಗಾರು ಚುರುಕುಗೊಳ್ಳಲಿದೆ.
ಮಂಗಳವಾರದ ನಂತರ ಮುಂಗಾರು ಮತ್ತಷ್ಟು ಪ್ರಬಲವಾಗಲಿದೆ. ಪಶ್ಚಿಮಘಟ್ಟ ಪ್ರದೇಶ, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗಲಿದೆ. ಸೋಮವಾರ ಶಿವಮೊಗ್ಗ, ಕೊಡಗು, ಹಾಸನ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಿಡಿಲಿನ ಆರ್ಭಟದಿಂದ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗಿದೆ.