ಎರಡು ದಿನ ಮೊದಲೇ ನೈಋತ್ಯ ಮುಂಗಾರು ದೇಶಾದ್ಯಂತ ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜಸ್ಥಾನ, ಹರಿಯಾಣ, ಪಂಜಾಬ್ ರಾಜ್ಯಗಳಿಗೆ ಮುಂಗಾರು ವ್ಯಾಪಿಸಿ ದೇಶಾದ್ಯಂತ ಮುಂಗಾರು ಮಳೆ ಆವರಿಸಿಕೊಂಡಂತಾಗಿದೆ.
ಇನ್ನು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಬಿರುಸುಗೊಂಡಿದೆ. ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 27 ರಿಂದ 29 ರವರೆಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಕರಾವಳಿಯಲ್ಲಿ ಗಂಟೆಗೆ 40 -50 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.