ಬೆಂಗಳೂರು: ನಿಸರ್ಗ ಚಂಡಮಾರುತದ ಕಾರಣದಿಂದ ಆರಂಭದಲ್ಲೇ ಕ್ಷೀಣಿಸಿದ್ದ ಮುಂಗಾರು ನಾಳೆಯಿಂದ ಬಿರುಸುಗೊಳ್ಳಲಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 11 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 12 ರಿಂದ 3 ದಿನ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಧಾರವಾಡ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಜ್ಯದ ಮಲೆನಾಡು, ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 11 ರಿಂದ 14ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಭಾರೀ ಮಳೆ ಆಗಬಹುದೆಂದು ಸೂಚನೆ ನೀಡಲಾಗಿದೆ.