ನಿರೀಕ್ಷೆಯಂತೆ ಜೂನ್ 1 ರಂದು ಕೇರಳ ಪ್ರವೇಶಿಸಿದ್ದ ನೈಋತ್ಯ ಮುಂಗಾರು ಮಾರುತಗಳು ರಾಜ್ಯಕ್ಕೆ ಗುರುವಾರ ಪ್ರವೇಶಿಸಿದೆ.
ಮುಂಗಾರುಮಳೆಯನ್ನೇ ಕಾಯುತ್ತಿದ್ದ ರೈತರಿಗೆ ಬಿತ್ತನೆ ಚಟುವಟಿಕೆ ಕೈಗೊಳ್ಳಲು ಅನುಕೂಲವಾಗಿದೆ. ಗುರುವಾರದಿಂದ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು ದಕ್ಷಿಣ ಭಾರತದ ರಾಜ್ಯಗಳಲ್ಲಿ ಪ್ರಸ್ತುತ ಸಾಲಿನಲ್ಲಿ ಶೇಕಡ 102 ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಚಾಮರಾಜನಗರ, ಹಾಸನ, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಮಳೆಯಾಗಿದೆ. ನಿಸರ್ಗ ಚಂಡಮಾರುತ ಪ್ರಭಾವ ಕಡಿಮೆಯಾಗಿ ಮಳೆಯ ತೀವ್ರತೆ ಕೂಡ ಇಳಿದಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಭಾರಿ ಮಳೆಯಾಗಬಹುದು ಎಂದು ಹೇಳಲಾಗಿದೆ.