ನೈರುತ್ಯ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿದ್ದು ಭಾನುವಾರದಿಂದ ರಾಜ್ಯದ ಬಹುತೇಕ ಭಾಗದಲ್ಲಿ ಭಾರೀ ಮಳೆಯಾಗಲಿದೆ.
ನಿರೀಕ್ಷೆಯಂತೆ ಜೂನ್ 1 ರಂದು ಕೇರಳ ಪ್ರವೇಶಿಸಿದ ಮುಂಗಾರು ಮಾರುತಗಳು ರಾಜ್ಯಕ್ಕೆ ಎಂಟ್ರಿಕೊಟ್ಟಿದ್ದು ಭಾನುವಾರದಿಂದ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಲಿದೆ.
ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಮುಂದಿನ ವಾರದಿಂದ ಮುಂಗಾರು ಮಾರುತಗಳ ಚಲನೆ ಚುರುಕಾಗಲಿದೆ. ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಮುಂಗಾರುಮಳೆಯಾಗಲಿದ್ದು, ಹೆಚ್ಚಿನ ಪ್ರದೇಶಗಳಿಗೆ ವ್ಯಾಪಿಸಲಿದೆ. ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ ಎಂದು ಹೇಳಲಾಗಿದೆ.