alex Certify ಪೊಲೀಸರ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ: ಪರಿಸ್ಥಿತಿ ತಿಳಿಗೊಳಿಸಿದ ಅಧಿಕಾರಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ: ಪರಿಸ್ಥಿತಿ ತಿಳಿಗೊಳಿಸಿದ ಅಧಿಕಾರಿ…?

ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ನಿಂದಿಸಿ ದರ್ಪ ತೋರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಡರಾತ್ರಿ ಪೊಲೀಸ್ ಸಿಬ್ಬಂದಿಯನ್ನು ಶಾಸಕ ಕುಮಾರಸ್ವಾಮಿ ನಿಂದಿಸಿದ್ದಾರೆ. ಪಾರ್ಕಿಂಗ್ ವಿಚಾರವಾಗಿ ನೈಟ್ ಬೀಟ್ ನಲ್ಲಿದ್ದ ಹೊಯ್ಸಳ ಸಿಬ್ಬಂದಿ ಹೆಚ್.ಪಿ. ನರಸಿಂಹಮೂರ್ತಿ, ಕಾನ್ಸ್ ಟೇಬಲ್ ಚಂದ್ರಶೇಖರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿಬಂದಿದೆ.

ವಿಧಾನಸೌಧ ಪೊಲೀಸ್ ಠಾಣೆ ವ್ಯಾಪ್ತಿಯ ಶಾಸಕರ ಭವನದ ಬಳಿ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಪೊಲೀಸ್ ಸಿಬ್ಬಂದಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಕಂಟ್ರೋಲ್ ರೂಂಗೆ ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಎಸಿಪಿ ಶಾಸಕರನ್ನು ಸಮಾಧಾನಗೊಳಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಘಟನೆಯ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ವಿಧಾನಸೌಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...