ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಪಿಎ(ಆಪ್ತ ಸಹಾಯಕ)ಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.
ಶಾಸಕ ರೇಣುಕಾಚಾರ್ಯ ಅವರು ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು, ಅವರಿಗೆ ನೆಗೆಟಿವ್ ವರದಿ ಬಂದಿದೆ. ರೇಣುಕಾಚಾರ್ಯ ಅವರಿಗೆ ಕೋವಿಡ್-19 ಟೆಸ್ಟ್ ವರದಿಯಲ್ಲಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಓಡಾಡಿಕೊಂಡಿದ್ದಾರೆ.