ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕಾರ್ಖಾನೆಗಳಲ್ಲೊಂದಾಗಿದ್ದ ಭದ್ರಾವತಿಯ ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಈ ಸಂಬಂಧ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಅರಣ್ಯ ಮತ್ತು ಕೈಗಾರಿಕಾ ಇಲಾಖೆ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸ್ಥಗಿತಗೊಂಡಿದ್ದ ಎಂ.ಪಿ.ಎಂ.ಕಾಗದ ಕಾರ್ಖಾನೆಯನ್ನು ಪುನರಾರಂಭಿಸಲು ರೂಪುರೇಷೆಗಳನ್ನು ಸಿದ್ಧಪಡಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಇರುವ ಅರಣ್ಯ ಸಂಪತ್ತನ್ನು ಬಳಸಿಕೊಂಡು ಕಾರ್ಖಾನೆಯನ್ನು ಸುಸ್ಥಿತಿಯಲ್ಲಿ ಮುಂದುವರೆಸಿಕೊಂಡು ಹೋಗುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಕಾರ್ಖಾನೆಯನ್ನು ಪುನರಾರಂಭಿಸುವ ಸಂಬಂಧ ಸಂಸದ ಬಿ..ವೈ.ರಾಘವೇಂದ್ರ ಮೊದಲಾದವರು ಸಿಎಂ ಗಮನ ಸೆಳೆದು ಒತ್ತಾಯಿಸಿದ್ದರು.