alex Certify ಸ್ಥಗಿತಗೊಂಡಿದ್ದ MPM ಕಾರ್ಖಾನೆಗೆ ಕಾಯಕಲ್ಪ: ಸಿಎಂ ಯಡಿಯೂರಪ್ಪ ಮಹತ್ವದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಥಗಿತಗೊಂಡಿದ್ದ MPM ಕಾರ್ಖಾನೆಗೆ ಕಾಯಕಲ್ಪ: ಸಿಎಂ ಯಡಿಯೂರಪ್ಪ ಮಹತ್ವದ ನಿರ್ಧಾರ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕಾರ್ಖಾನೆಗಳಲ್ಲೊಂದಾಗಿದ್ದ ಭದ್ರಾವತಿಯ ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸಂಬಂಧ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಅರಣ್ಯ ಮತ್ತು ಕೈಗಾರಿಕಾ ಇಲಾಖೆ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸ್ಥಗಿತಗೊಂಡಿದ್ದ ಎಂ.ಪಿ.ಎಂ.ಕಾಗದ ಕಾರ್ಖಾನೆಯನ್ನು ಪುನರಾರಂಭಿಸಲು ರೂಪುರೇಷೆಗಳನ್ನು ಸಿದ್ಧಪಡಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಇರುವ ಅರಣ್ಯ ಸಂಪತ್ತನ್ನು ಬಳಸಿಕೊಂಡು ಕಾರ್ಖಾನೆಯನ್ನು ಸುಸ್ಥಿತಿಯಲ್ಲಿ ಮುಂದುವರೆಸಿಕೊಂಡು ಹೋಗುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಕಾರ್ಖಾನೆಯನ್ನು ಪುನರಾರಂಭಿಸುವ ಸಂಬಂಧ ಸಂಸದ ಬಿ..ವೈ.ರಾಘವೇಂದ್ರ ಮೊದಲಾದವರು ಸಿಎಂ ಗಮನ ಸೆಳೆದು ಒತ್ತಾಯಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...