alex Certify ಕಾಂಗ್ರೆಸ್ ನಿಂದ ಸಣ್ಣತನದ ರಾಜಕೀಯ: ಮುನಿರತ್ನ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ನಿಂದ ಸಣ್ಣತನದ ರಾಜಕೀಯ: ಮುನಿರತ್ನ ವಾಗ್ದಾಳಿ

ಬೆಂಗಳೂರು: ಆರ್.ಆರ್. ನಗರದಲ್ಲಿ ಉಪಚುನಾವಣೆ ಪ್ರಚಾರದ ಭರಾಟೆ ಜೋರಾಗಿದೆ. ನಿನ್ನೆ ಸಂಜೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಪ್ರಚಾರಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಇದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಚಾರದ ವೇಳೆ ಗಲಾಟೆ ನಡೆದಿದೆ ಎಂದು ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಪ್ರತಿಭಟನೆ ನಡೆಸಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನವರಿಗೆ ಬೇರೆ ಏನೂ ಉಳಿದಿಲ್ಲ. ಹಾಗಾಗಿ ಗಲಾಟೆ ಮಾಡಿಸಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ಈ ಮೂಲಕ ಸಣ್ಣತನದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇಂತಹ ನಡೆ ಕಾಂಗ್ರೆಸ್ ಗೆ ಶೋಭೆ ತರುವಂತಹುದಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಮುನಿರತ್ನ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...