ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಇದಿನಿಂದ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಹಾಕುವ ಪ್ರಕ್ರಿಯೆ ಆರಂಭವಾಗಿದೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ದೇವನಹಳ್ಳಿಯಲ್ಲಿ ಮಾತನಾಡಿದ ಸಚಿವರು, ಬಿಪಿಎಲ್ ಕಾರ್ಡ್ ನಲ್ಲಿ ಹೆಸರಿರುವ ಪ್ರತಿಯೊಬ್ಬರಿಗೂ ತಲಾ 170 ರೂಪಾಯಿ ನೀಡುತ್ತೇವೆ. 5ಕೆಜಿ ಅಕ್ಕಿ ಜೊತೆಗೆ ಇನ್ನೈದು ಕೆಜಿ ಅಕ್ಕಿಗೆ ಹಣ ನೀಡುತ್ತೇವೆ. 1.29 ಲಕ್ಷ ಬಿಪಿಎಲ್ ಕಾರ್ಡ್ ದಾರರ ಖಾತೆಗೆ ಹಣ ಹಾಕುತ್ತೇವೆ. 10 ದಿನದವರೆಗೆ ಬಿಪಿಎಲ್ ಕಾರ್ಡ್ ದಾರರಿಗೆ ಈ ತಿಂಗಳ ಹಣ ಹಾಕುತ್ತೇವೆ. ಶೇ.90ರಷ್ಟು ಬಿಪಿಎಲ್ ಕಾರ್ಡ್ ದಾರರ ಅಕೌಂಟ್ ಲಿಂಕ್ ಆಗಿದೆ ಎಂದರು.
ಶೇ.10ರಷ್ಟು ಜನ ಬ್ಯಾಂಕ್ ಖಾತೆ ಮಾಡಿಸದೇ ಇರಬಹುದು. ಕೂಡಲೇ ಬ್ಯಾಂಕ್ ಖಾತೆ ಮಾಡಿಸಬೇಕು. ಎಲ್ಲರಿಗೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಹಣ ನೀಡುತ್ತೇವೆ. ಅಧಿಕಾರಿಗಳು ಟೆಕ್ನಿಕಲ್ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.