alex Certify ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮನೆಗೆ ನುಗ್ಗಿ ಒಂಟಿ ಮಹಿಳೆ ಬರ್ಬರ ಹತ್ಯೆ, ಚಿನ್ನದ ಸರ ದೋಚಿ ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮನೆಗೆ ನುಗ್ಗಿ ಒಂಟಿ ಮಹಿಳೆ ಬರ್ಬರ ಹತ್ಯೆ, ಚಿನ್ನದ ಸರ ದೋಚಿ ಪರಾರಿ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕು ವ್ಯಾಪ್ತಿಯ ಸಿಂಗೇನ ಅಗ್ರಹಾರದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ನಿನ್ನೆ ರಾತ್ರಿ ಘಟನೆ ನಡೆದಿದ್ದು ಮಹಿಳೆಯ ಹೊಟ್ಟೆ, ಎದೆಗೆ ಚಾಕುವಿನಿಂದ ಇರಿದು ಕೊಲೆಮಾಡಿದ ದುಷ್ಕರ್ಮಿಗಳು ಕುತ್ತಿಗೆಯಲ್ಲಿದ್ದ ಮಾಂಗಲ್ಯಸರ ದೋಚಿ ಪರಾರಿಯಾಗಿದ್ದಾರೆ. ಪತಿ ಕೆಲಸಕ್ಕೆ ತೆರಳಿದ್ದರು. ಮಗ ಸಂಬಂಧಿ ಮನೆಯಲ್ಲಿದ್ದರು.

ಮನೆಯಲ್ಲಿ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿದ ದುಷ್ಕರ್ಮಿಗಳು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿ ಸರ ದೋಚಿ ಪರಾರಿಯಾಗಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...