alex Certify ಬೆಳಗಿನಜಾವ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ; ಮೂವರ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಿನಜಾವ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ; ಮೂವರ ಬರ್ಬರ ಹತ್ಯೆ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಸಮೀಪ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಾರೇಶ(50), ಯಲ್ಲೇಶ(30) ಹಾಗೂ ಸೀನಪ್ಪ(30) ಕೊಲೆಯಾದವರು ಎಂದು ಗುರುತಿಸಲಾಗಿದೆ. ಮೂವರು ಹಂದಿ ಸಾಕಾಣಿಕೆ ಮಾಡಿಕೊಂಡಿದ್ದು, ಹಂದಿ ಕದಿಯಲು ಬಂದವರು ಈ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ.

ಹಂದಿ ಸಾಕಾಣಿಕೆ ಸ್ಥಳದಲ್ಲಿ ಕದಿಯಲು ಬಂದವರು ಖಾರದಪುಡಿ ಎರಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ನಾಯಕನಹಟ್ಟಿ ಟಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...