
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಜಿಮ್ ಟ್ರೈನರ್ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬನ್ನೇರುಘಟ್ಟ ಸಮೀಪದ ರಾಮಸಂದ್ರದಲ್ಲಿ ನಡೆದಿದೆ.
ಜಿಮ್ ಟ್ರೈನರ್ ಕಿರಣ್ ಎಂಬವವರು ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟದಲ್ಲಿ ಘಟನೆ ನಡೆದಿದೆ.
ಮಧ್ಯಾಹ್ನ ಮಾತನಾಡಲು ಬರುವಂತೆ ಕಿರಣ್ ಅವರನ್ನು ಕರೆಸಿಕೊಂಡಿದ್ದ ಸ್ನೇಹಿತರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.