
ಗದಗ ಜಿಲ್ಲೆ ಲಕ್ಷ್ಮೇಶ್ವರ ಸಮೀಪ ಸೂರಣಗಿ ಗ್ರಾಮದ ಬಳಿ ಅಕ್ರಮ ಸಂಬಂಧ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ.
40 ವರ್ಷದ ಮರಿಯಪ್ಪ ಕೊಲೆಯಾದವರು ಎಂದು ಹೇಳಲಾಗಿದೆ. ಶನಿವಾರ ತಡರಾತ್ರಿ ಬೆಳ್ಳಟ್ಟಿ ರಸ್ತೆಯ ಬಳಿ ಮಾರಕಾಸ್ತ್ರಗಳಿಂದ ಥಳಿಸಿ ಭೀಕರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು ಮೃತದೇಹವನ್ನು ಹೊಲದಲ್ಲಿ ಎಸೆದು ಪರಾರಿಯಾಗಿದ್ದಾರೆ. ಅಕ್ರಮ ಸಂಬಂಧವೇ ಕೊಲೆಗೆ ಕಾರಣವೆಂದು ಹೇಳಲಾಗಿದೆ.
ಮಾಹಿತಿ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಕ್ಷ್ಮೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.