
ರಾಯಚೂರು: ಪ್ರೇಮ ವಿವಾಹ ಮಾಡಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸಿಂಧನೂರು ಪಟ್ಟಣದ ಸುಕಾಲಪೇಟೆಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಸುಕಾಲಪೇಟೆಯಲ್ಲಿ ಕಲ್ಲು, ದೊಣ್ಣೆಗಳಿಂದ ಹೊಡೆದು ಐವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಬರ್ಬರವಾಗಿ ಹತ್ಯೆಗೀಡಾಗಿದ್ದಾರೆ ಎನ್ನಲಾಗಿದೆ.
ಸಿಂಧನೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.