alex Certify ಸ್ನೇಹಿತರೊಂದಿಗೆ ಸೇರಿ ನಟಿ ಪ್ರಿಯಕರನಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನೇಹಿತರೊಂದಿಗೆ ಸೇರಿ ನಟಿ ಪ್ರಿಯಕರನಿಂದಲೇ ಘೋರ ಕೃತ್ಯ

ಹುಬ್ಬಳ್ಳಿ ಕೇಶ್ವಾಪುರ ಠಾಣೆ ಪೊಲೀಸರು ಕೊಲೆ ಪ್ರಕರಣವನ್ನು ಬಯಲಿಗೆಳೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇತ್ತೀಚೆಗೆ ರುಂಡ-ಮುಂಡ ಬೇರ್ಪಡಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಭೀಕರ ಹತ್ಯೆ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ನಿಯಾಜ್ ಅಹಮದ್, ತೌಸೀಫ್, ಅಲ್ತಾಫ್ ಮತ್ತು ಅಮನ್ ಬಂಧಿತ ಆರೋಪಿಗಳೆಂದು ಹೇಳಲಾಗಿದೆ.

ಧಾರಾವಾಹಿ ನಟಿ ಹಾಗೂ ನಿಯಾಜ್ ಪ್ರೀತಿಸಿದ್ದರು. ಇದೇ ವಿಚಾರಕ್ಕೆ ಹತ್ಯೆ ನಡೆದಿದೆ ಎನ್ನಲಾಗಿದೆ. ನಟಿಯ ಸಹೋದರ ರಾಕೇಶ್ ಇವರ ಪ್ರೀತಿಗೆ ಅಡ್ಡಿಯಾಗಿದ್ದು, ವಿರೋಧ ವ್ಯಕ್ತಪಡಿಸಿದ್ದು, ಹೀಗಾಗಿ ಸಹಚರರೊಂದಿಗೆ ಸೇರಿ ರಾಕೇಶ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ರುಂಡ-ಮುಂಡ ಬೇರ್ಪಡಿಸಿ ಸುಟ್ಟುಹಾಕಲು ಪ್ರಯತ್ನಿಸಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...