
ವಿಜಯಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ವಿಜಯಪುರ ಹೊರವಲಯದ ಇಟ್ಟಂಗಿಹಾಳ ರಸ್ತೆ ಸಮೀಪ ನಡೆದಿದೆ.
ರೌಡಿ ಶೀಟರ್ ದಸ್ತಗಿರ ಸಾಬ ಮಮದಾಪುರ(45) ಕೊಲೆಯಾದವ ಎಂದು ಹೇಳಲಾಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಅಣ್ಣಪ್ಪಗೌಡ ಮತ್ತು ಇತರರ ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದು, ಅಣ್ಣಪ್ಪಗೌಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆದರ್ಶ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.