alex Certify 1 ವರ್ಷ ಮಾಸ್ಕ್ ಕಡ್ಡಾಯ: ಇಲ್ಲದಿದ್ರೆ ಬೆಂಗಳೂರಲ್ಲಿ 1 ಸಾವಿರ ರೂ., ಉಳಿದೆಡೆ 200 ರೂ. ದಂಡ ಕಟ್ಟಲು ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ವರ್ಷ ಮಾಸ್ಕ್ ಕಡ್ಡಾಯ: ಇಲ್ಲದಿದ್ರೆ ಬೆಂಗಳೂರಲ್ಲಿ 1 ಸಾವಿರ ರೂ., ಉಳಿದೆಡೆ 200 ರೂ. ದಂಡ ಕಟ್ಟಲು ಆದೇಶ

ಬೆಂಗಳೂರು: ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ರಾಜ್ಯಾದ್ಯಂತ ಒಂದು ವರ್ಷ ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ.

ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ 1 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಇಲ್ಲದಿದ್ದರೆ ದಂಡ ವಿಧಿಸುವ ಆದೇಶವನ್ನು ಸರ್ಕಾರ ಜಾರಿಗೆ ತಂದಿದೆ.

ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ 1,000 ರೂಪಾಯಿ ದಂಡ ವಿಧಿಸಲಾಗುವುದು. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ 200 ರೂಪಾಯಿ ದಂಡ ಹಾಕಲಾಗುವುದು. ಉಳಿದ ಕಡೆಗಳಲ್ಲಿ 100 ರೂಪಾಯಿ ದಂಡ ಹಾಕಲಾಗುವುದು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಬ್ಇನ್ಸ್ಪೆಕ್ಟರ್ ಹಂತದ ಮತ್ತು ಮೇಲಿನ ಅಧಿಕಾರಿಗಳು, ಪುರಸಭೆಯ ಆರೋಗ್ಯ ನಿರೀಕ್ಷಕರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಓ ಮತ್ತು ಸರ್ಕಾರ ಸೂಚಿಸಿದ ಇತರ ಅಧಿಕಾರಿಗಳು ದಂಡ ವಸೂಲಿ ಮಾಡಲಿದ್ದಾರೆ.

ಮುಂದಿನ ಒಂದು ವರ್ಷ ಕಾಲ ರಾಜ್ಯಾದ್ಯಂತ ಮಾಸ್ಕ್ ಹಾಕುವುದನ್ನು ಕಡ್ಡಾಯ ಮಾಡಲಾಗಿದ್ದು, ಇಲ್ಲವಾದರೆ, ದಂಡ ಹಾಕಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...