ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ವ್ಯಕ್ತಿಯೊಬ್ಬ ಪುತ್ರಿಯನ್ನೇ ಹತ್ಯೆ ಮಾಡಿದ್ದಾನೆ.
ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ನಂತರ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. 19 ವರ್ಷದ ಗಾಯತ್ರಿ ಮೃತಪಟ್ಟ ಯುವತಿ ಎಂದು ಹೇಳಲಾಗಿದೆ.
ಅನ್ಯ ಜಾತಿಯ ಯುವಕನನ್ನು ಗಾಯತ್ರಿ ಪ್ರೀತಿಸಿದ್ದು, ಮನೆಯವರು ಒಪ್ಪಿರಲಿಲ್ಲ. ಬುದ್ಧಿವಾದ ಹೇಳಿದರೂ ಕೇಳದೆ ಪ್ರೀತಿಸಿದ ಯುವಕನನ್ನೇ ಮದುವೆಯಾಗುವುದಾಗಿ ಗಾಯತ್ರಿ ತಿಳಿಸಿದ್ದಳು. ಇದರಿಂದ ಆಕ್ರೋಶಗೊಂಡ ತಂದೆ ಜೈರಾಮ್ ಇಂತಹ ಕೃತ್ಯವೆಸಗಿದ್ದಾನೆನ್ನಲಾಗಿದೆ.
ಜಮೀನಿಗೆ ಊಟ ಕೊಡಲು ಬಂದ ಮಗಳನ್ನು ಜಯರಾಂ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಪಿರಿಯಾಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.