ಮೈಸೂರು: ಸ್ನೇಹಿತರ ನಡುವೆ ನಡೆದ ಗಲಾಟೆ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಮೈಸೂರು ನಗರದ ಬೋಗಾದಿ ಬಳಿ ಘಟನೆ ನಡೆದಿದೆ. ಹೆಚ್.ಡಿ. ಕೋಟೆ ತಾಲೂಕಿನ ಕೊತ್ತೆಗಾಲ ಗ್ರಾಮದ ರವಿ ಮತ್ತು ಬಸವ ಹತ್ಯೆಯಾದವರು ಎಂದು ಹೇಳಲಾಗಿದೆ.
ಆರೋಪಿ ಮಹೇಶ್ ಮತ್ತು ಆತನಿಗೆ ಸಹಕರಿಸಿದ ಸ್ನೇಹಿತನನ್ನು ಸರಸ್ವತಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಸ್ನೇಹಿತರು ಪಾರ್ಟಿ ಮಾಡುತ್ತಿದ್ದ ವೇಳೆಯಲ್ಲೇ ಮಹೇಶನ ಪತ್ನಿಯನ್ನು ಚುಡಾಯಿಸಿದ ವಿಚಾರ ಪ್ರಸ್ತಾಪವಾಗಿ ಸ್ನೇಹಿತರ ನಡುವೆ ಗಲಾಟೆಯಾಗಿದ್ದು, ಆಕ್ರೋಶಗೊಂಡ ಮಹೇಶ್ ರಾಡ್ ನಿಂದ ರವಿ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ತಡೆಯಲು ಬಂದ ಬಸವನನ್ನು ಕೂಡ ಹತ್ಯೆ ಮಾಡಲಾಗಿದೆ. ಮಹೇಶನಿಗೆ ಆತನ ಸ್ನೇಹಿತ ಸಾಥ್ ನೀಡಿದ್ದಾನೆ. ಪೊಲೀಸರು ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.