alex Certify ಆಪ್ತ ಸಹಾಯಕನಿಗೆ ಸಿಎಂ ಯಡಿಯೂರಪ್ಪ ಬಂಪರ್ ಗಿಫ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಪ್ತ ಸಹಾಯಕನಿಗೆ ಸಿಎಂ ಯಡಿಯೂರಪ್ಪ ಬಂಪರ್ ಗಿಫ್ಟ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವಲ್ಲಿ ತೆರೆಮರೆಯಲ್ಲಿ ಕಾರ್ಯನಿರ್ವಹಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಎನ್.ಆರ್. ಸಂತೋಷ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.

ರಾಜ್ಯ ಸಚಿವರ ಸ್ಥಾನಮಾನದೊಂದಿಗೆ ಎನ್.ಆರ್. ಸಂತೋಷ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಆಪರೇಷನ್ ಕಮಲ ಮೂಲಕ ಅನ್ಯ ಪಕ್ಷದ ಶಾಸಕರನ್ನು ಸೆಳೆದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವಲ್ಲಿ ಸಂತೋಷ್ ಪ್ರಮುಖ ಪಾತ್ರವಹಿಸಿದ್ದರು.

ಈಗಾಗಲೇ ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಎಸ್.ಆರ್. ವಿಶ್ವನಾಥ್ ಮತ್ತು ಬಿಜೆಪಿ ಕಿಸಾನ್ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಶಂಕರಗೌಡ ಪಾಟೀಲ್ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದ್ದು ಇವರೊಂದಿಗೆ ಸಂತೋಷ್ ಕೂಡ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಎಬಿವಿಪಿ ಸಕ್ರಿಯ ಕಾರ್ಯಕರ್ತರಾಗಿ, ಸಿಎಂ ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿ ಸಂತೋಷ್ ಕಾರ್ಯನಿರ್ವಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...