alex Certify ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದಲಿತರ ಪರವಾಗಿಲ್ಲ. ಭಯೋತ್ಪಾದಕರ ಪರವೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ನಳಿನ್ ಕುಮಾರ್ ಕಟೀಲ್ ಅವರೇ, ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ ಎಂದು ಹೇಳಿದ್ದಾರೆ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಇಲ್ಲ. ನಾವು ಕಟ್ಟುವವರ ಪರವಾಗಿದ್ದೇವೆ. ಕೆಡವುವವರ ಪರವಾಗಿಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ ಎಂದು ತಿಳಿಸಿದ್ದಾರೆ.

ಕಟೀಲ್ ಅವರೇ ನೀವು ದಲಿತರ ಪರವೋ? ಹಿಂದುಗಳ ಪರವೋ? ನೀವೊಬ್ಬ ಹಿಂದುವಾದರೆ ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ? ಅವರು ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು? ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...