ದಾವಣಗೆರೆ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ (ಚನ್ನಗಿರಿ ತಾಲ್ಲೂಕು ಹೊರತುಪಡಿಸಿ) ಕೈಗೊಳ್ಳಬಹುದಾದ ಕಾಮಗಾರಿಗಳನ್ನು ನಿರ್ವಹಿಸಲು ಮೇಲುಸ್ತುವಾರಿ ನಿರ್ವಹಿಸುವ ಬಿ.ಎಫ್.ಟಿ(ಬೇರ್ರೂಟ್ ಟೆಕ್ನೀಷಿಯನ್)ಗಳನ್ನು ಸ್ಕ್ರೀನಿಂಗ್ ಟೆಸ್ಟ್ ಮೂಲಕ ಗೌರವಧನ ಪಾವತಿಸುವ ನಿಬಂಧನೆ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು.
ನರೇಗಾ ಕಾಮಗಾರಿಗಳನ್ನು ಗುರುತಿಸುವುದು, ತಾಂತ್ರಿಕ ಸಹಾಯಕರಿಗೆ ಸಹಾಯ ಮಾಡುವುದು, ಗ್ರಾಮಸಭೆ ಮಂಡಿಸುವುದು ಹಾಗೂ ಒಟ್ಟಾರೆಯಾಗಿ ಯೋಜನೆಯಡಿ ನಿರ್ವಹಿಸುವ ಎಲ್ಲಾ ಕಾಮಗಾರಿಗಳ ಮೇಲುಸ್ತುವಾರಿ ಮಾಡುವುದಾಗಿದೆ.
ಹುದ್ದೆಯ ಮಾನದಂಡಗಳು: ಕನಿಷ್ಠ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು, ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಯಲ್ಲಿ ಕಡ್ಡಾಯವಾಗಿ ಉದ್ಯೋಗ ಚೀಟಿ ಹೊಂದಿರಬೇಕು, ವಯೋಮಿತಿ 45 ವರ್ಷದೊಳಗಿರಬೇಕು, ಕಳೆದ ಎರಡು ಆರ್ಥಿಕ ವರ್ಷಗಳಲ್ಲಿ ಯೋಜನೆಯಡಿ ಉದ್ಯೋಗ ನಿರ್ವಹಿಸಬೇಕು.
ಬಿ.ಎಫ್.ಟಿ ಹುದ್ದೆಗಾಗಿ ಅರ್ಜಿ ಸಲ್ಲಿಸಲು ಬಯಸುವವರು ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕಚೇರಿ ಅವಧಿಯಲ್ಲಿ ಅರ್ಜಿ ಪಡೆದು ನಿಗದಿಪಡಿಸಿದ ದಾಖಲೆಗಳೊಂದಿಗೆ ಜೂನ್ 26 ರೊಳಗೆ ಸೀಲ್ ಮಾಡಿದ ಲಕೋಟೆಯಲ್ಲಿ ಖುದ್ದಾಗಿ ತಾಲ್ಲೂಕು ಪಂಚಾಯಿತಿ ಕಚೇರಿಯ ನರೇಗಾ ಶಾಖೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ನ ಉಚಿತ ಸಹಾಯವಾಣಿ 1800-425-2203ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ ತಿಳಿಸಿದ್ದಾರೆ.