ಶಿವಮೊಗ್ಗ: ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸಿ ಯಾವುದೇ ಸಕಾರಣವಿಲ್ಲದೆ ತಿರುಗಾಡುತ್ತಿದ್ದ ವ್ಯಕ್ತಿಗಳು ಮತ್ತು ಅವರು ಸಂಚರಿಸುತ್ತಿದ್ದ ವಾಹನಗಳ ವಿರುದ್ಧ NDMA ಕಾಯ್ದೆ ರೀತ್ಯಾ ನ್ಯಾಯಾಲಯದಲ್ಲಿ ಪ್ರತ್ಯೇಕ 5 ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರತಿ ದಿನ ರಾತ್ರಿ ಕರ್ಫ್ಯೂ ಆದೇಶವನ್ನು ಹೊರಡಿಸಿದ್ದು, ಜೂನ್ 18 ರಂದು ರಾತ್ರಿ ವೇಳೆಯಲ್ಲಿ ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸಿ ಅನಾವಶ್ಯಕವಾಗಿ ತಿರುಗಾಡುತ್ತಿದ್ದ ವಾಹನ ಸವಾರರು ಹಾಗೂ ಅವರ ವಾಹನಗಳ ವಿರುದ್ಧ ಕಲಂ 51 (b) NDMA ಕಾಯ್ದೆ ಅಡಿಯಲ್ಲಿ ಪ್ರತ್ಯೇಕವಾಗಿ 5 ಪ್ರಕರಣಗಳನ್ನು ದಾಖಲಿಸಿದೆ.
ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯ ವಿರುದ್ದ, ಸಾಗರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಬ್ಬ ಕಾರು ಚಾಲಕನ ವಿರುದ್ಧ, ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಜನ ದ್ವಿಚಕ್ರ ವಾಹನ ಸವಾರರ ವಿರುದ್ಧ 3 ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕರು ಮಾಹಿತಿ ನೀಡಿದ್ದಾರೆ.