alex Certify NET ಪ್ರಶ್ನೆ ಪತ್ರಿಕೆ ಎಡವಟ್ಟು; ಇದು ಕನ್ನಡದ ಮೇಲಿನ ತಾತ್ಸಾರ, ಹಿಂದಿ ಹೇರಿಕೆಯ ವಿಪರೀತ; ಕಿಡಿಕಾರಿದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

NET ಪ್ರಶ್ನೆ ಪತ್ರಿಕೆ ಎಡವಟ್ಟು; ಇದು ಕನ್ನಡದ ಮೇಲಿನ ತಾತ್ಸಾರ, ಹಿಂದಿ ಹೇರಿಕೆಯ ವಿಪರೀತ; ಕಿಡಿಕಾರಿದ ಕುಮಾರಸ್ವಾಮಿ

ಬೆಂಗಳೂರು: ಎನ್ ಇ ಟಿ ಕನ್ನಡ ಪರೀಕ್ಷೆಯಲ್ಲಿ ಹಿಂದಿ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆ ವಿಚಾರವಾಗಿ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದು ಹಿಂದಿ ಹೇರಿಕೆಯ ವಿಪರೀತ. ಕನ್ನಡಕ್ಕೆ ಮಾಡುತ್ತಿರುವ ದ್ರೋಹ ಎಂದು ಗುಡುಗಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ಎನ್ ಇ ಟಿ ಕನ್ನಡ ಐಚ್ಛಿಕ ಭಾಷಾ ಪ್ರಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲಿದ್ದವು ಇದರಿಂದ ಸಿಡಿದೆದ್ದ ಪರೀಕ್ಷಾರ್ಥಿಗಳು ಪರೀಕ್ಷೆ ಬಿಟ್ಟು ಪ್ರತಿಭಟನೆ ನಡೆಸಿದ್ದರು.

ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ ಎಂದು ಪ್ರಶ್ನಿಸಿದ್ದಾರೆ.

ಹೆಚ್ಚಿದ ಒಮಿಕ್ರಾನ್ ಸೋಂಕು; 578 ಜನರಲ್ಲಿ ರೂಪಾಂತರಿ ವೈರಸ್ ಪತ್ತೆ

ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರ್ಕಾರದ ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ, ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ ನೆನಪಿರಲಿ ಎಂದು ಎಚ್ಚರಿಸಿದ್ದಾರೆ.

ಈ ಅನ್ಯಾಯ ಸಹಿಸುವ ಪ್ರಶ್ನೆ ಇಲ್ಲ. ಕೂಡಲೇ ಪರೀಕ್ಷಾ ಸಂಸ್ಥೆ ಆಗಿರುವ ಲೋಪ ಸರಿಮಾಡಿ ಪುನಃ ಪರೀಕ್ಷೆ ನಡೆಸಿ. ಎರಡು ವರ್ಷಗಳಿಂದ ಪರೀಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...