alex Certify ಬಿಗ್‌ ಬ್ರೇಕಿಂಗ್: ಇಂದಿನಿಂದಲೇ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ – ಜನವರಿ 2 ರವರೆಗೆ ಮುಂದುವರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ಬ್ರೇಕಿಂಗ್: ಇಂದಿನಿಂದಲೇ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ – ಜನವರಿ 2 ರವರೆಗೆ ಮುಂದುವರಿಕೆ

ಕೊರೊನಾ ವೈರಸ್‌ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜನತೆಯ ಸುರಕ್ಷತೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದೆ. ರಾಜ್ಯದಲ್ಲಿ ಇಂದಿನಿಂದಲೇ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ಜನವರಿ 2 ರವರೆಗೆ ಇದು ಮುಂದುವರೆಯಲಿದೆ.

ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಬೆಳಿಗ್ಗೆ 6 ಗಂಟೆ ಬಳಿಕ ಜನಜೀವನ ಎಂದಿನಂತೆ ನಡೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದು, 10 ಮತ್ತು 12 ನೇ ತರಗತಿಗಳು ಈ ಮೊದಲಿನಂತೆ ಜನವರಿ 1 ರಿಂದ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಕ್ರಿಸ್ಮಸ್‌ ಹಾಗೂ ಹೊಸ ವರ್ಷದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದ್ದು, ಶಾಲಾ – ಕಾಲೇಜು ಆರಂಭದ ಕುರಿತೂ ಮುಂದಿನ ಬೆಳವಣಿಗೆಗಳನ್ನು ಗಮನಿಸಿ ಪರಿಶೀಲಿಸುವ ಸಾಧ್ಯತೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...