
ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಸಿ ಜನರಲ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜೂನ್ 18 ರಂದು ಕೆಸಿ ಜನರಲ್ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ತಡರಾತ್ರಿ 2.30 ರ ವೇಳೆಗೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ.
ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.